ಗಣೇಶೋತ್ಸವದ ಸಂದರ್ಭದಲ್ಲಿ ಆರ್ಕೆಸ್ಟ್ರಾ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ವಾಡಿಕೆ. ಆದರೆ ಭದ್ರಾವತಿಯಲ್ಲಿನ ಯುವಕ ಸಂಘವೊಂದು ವಿಭಿನ್ನವಾಗಿ ಗಣೇಶೋತ್ಸವ ಆಚರಿಸಿ ಎಲ್ಲರ ಗಮನ ಸೆಳೆದಿದೆ.
ಹೌದು, ಕಾಗದ ನಗರದ ಕನ್ನಡ ಯುವಕರ ಸಂಘ ಗಣೇಶೋತ್ಸವದ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಕ್ವಿಜ್ ಕಾರ್ಯಕ್ರಮ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ 18 ಶಾಲೆಗಳ ಮಕ್ಕಳು ಭಾಗವಹಿಸಿದ್ದು, ಪ್ರೇಕ್ಷಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು.
ಖಗೋಳ ತಜ್ಞ ಹರೋನಹಳ್ಳಿ ಸ್ವಾಮಿ, ಈ ಕ್ವಿಜ್ ಕಾರ್ಯಕ್ರಮ ನಡೆಸಿಕೊಟ್ಟಿದ್ದು, ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ ಬಹುಮಾನ 3000 ರೂ. ಹಾಗೂ ತೃತೀಯ ಬಹುಮಾನವಾಗಿ 1000 ರೂಪಾಯಿಗಳನ್ನು ಕ್ವಿಜ್ ಕಾರ್ಯಕ್ರಮದಲ್ಲಿ ವಿಜೇತರಾದ ತಂಡಗಳಿಗೆ ನೀಡಲಾಯಿತು.