ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಗದಗ ಜಿಲ್ಲೆಯಲ್ಲೂ ಮಳೆ ಮುಂದುವರೆದಿದೆ.
ಇದರ ಪರಿಣಾಮವಾಗಿ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದ್ದು, ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ಸೇತುವೆ ಮುಳುಗಡೆಯಾಗಿದೆ.
ಸೇತುವೆ ಮುಳುಗಡೆಯಾಗಿರುವುದರಿಂದ ರೋಣ – ನರಗುಂದ ಸಂಪರ್ಕ ಕಡಿತವಾಗಿದ್ದು, ಬೆಣ್ಣೆ ಹಳ್ಳದ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿರುವ ಪರಿಣಾಮ ಅಪಾರ ಬೆಳೆ ನಷ್ಟವಾಗಿದೆ.