ಗನ್ ಪಾಯಿಂಟ್ ಇಟ್ಟು ಬೆದರಿಸಿ ಲೂಟಿ…! ಬೆಚ್ಚಿಬೀಳಿಸುವಂತಿದೆ ಬೆಳ್ಳಂಬೆಳಗ್ಗೆ ನಡೆದ ಘಟನೆ 04-04-2022 7:25PM IST / No Comments / Posted In: Latest News, India, Live News, Crime News ಜನನಿಬಿಡ ಪ್ರದೇಶದಲ್ಲಿ ಬಂದೂಕು ತೋರಿಸಿ ಇಬ್ಬರನ್ನು ಲೂಟಿ ಮಾಡಿದ ಘಟನೆಯು ದೆಹಲಿಯ ವಿವೇಕ್ ವಿಹಾರ ಪ್ರದೇಶದ ಯಮುನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಬಳಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಬೆಳಗ್ಗೆ 6:15ರ ಸುಮಾರಿಗೆ ದೂರುದಾರ ತನ್ನ ಸ್ನೇಹಿತನೊಂದಿಗೆ ಮನೆಯಿಂದ ಯಮುನಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಬಳಿ ವಾಯು ವಿಹಾರ ಮಾಡುತ್ತಿದ್ದ ವೇಳೆಯಲ್ಲಿ ಬೈಕಿನಲ್ಲಿ ಬಂದ ಇಬ್ಬರು ಯುವಕರು ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಚಿನ್ನದ ಕಡಗವನ್ನು ದೋಚಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು ಎರಡು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. Two people were looted at gunpoint in Vivek Vihar area of Delhi near Yamuna Sports Complex, early this morning. Case registered, accused being searched: Delhi Police (Video: CCTV) pic.twitter.com/k3tcAdfwGH — ANI (@ANI) April 3, 2022