alex Certify ಗಮನಿಸಿ: ಇಂದಿನಿಂದ ನಾಳೆ ಬೆಳಿಗ್ಗೆವರೆಗೂ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಇಂದಿನಿಂದ ನಾಳೆ ಬೆಳಿಗ್ಗೆವರೆಗೂ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಮೈಸೂರು: ಇಂದಿನಿಂದ ನಾಳೆ ಬೆಳಿಗ್ಗೆ 7:30ರವರೆಗೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರು ಹಾಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ನಾಡ ಅಧಿದೇವತೆ ಚಾಮುಂಡಿದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆ ಬಳಿಕ ಭಕ್ತಾದಿಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ.

ಈ ಬಗ್ಗೆ ದೇವಸ್ಥಾನದ ಉಸ್ತುವಾರಿ ಮುಜರಾಯಿ ತಹಶೀಲ್ದಾರ್ ಕೃಷ್ಣ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಿಗ್ಗೆ 7:30ರವರೆಗೆ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲಾಡಳಿತ, ದೇವಸ್ಥಾನ ಮಂಡಳಿ ಕೂಡ ಈಗಾಗಲೇ ತಿಳಿಸಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...