ಸಿಇಟಿ ರ್ಯಾಂಕಿಂಗ್ ಕುರಿತಂತೆ ಇದ್ದ ಗೊಂದಲ ಈಗ ಬಗೆಹರಿದಿದ್ದು, ಹೈಕೋರ್ಟ್ ಆದೇಶದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಸಿಇಟಿ ಪರಿಷ್ಕೃತ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಲಿದೆ.
ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಹೊಸ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ರ್ಯಾಂಕಿಂಗ್ ಪಟ್ಟಿ ವೀಕ್ಷಿಸಲು ವಿದ್ಯಾರ್ಥಿಗಳು ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ karresults.nic.in ಗೆ ಭೇಟಿ ನೀಡಬಹುದಾಗಿದೆ.