alex Certify ಗಮನಿಸಿ: ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಸಾಧ್ಯತೆ

ಕಳೆದ ಕೆಲ ದಿನಗಳ ಹಿಂದೆ ರಾಜ್ಯದ ವಿವಿಧೆಡೆ ಮಳೆ ಸುರಿದಿದ್ದು, ಕೆಲವೊಂದು ಭಾಗಗಳಲ್ಲಿ ಆಲಿಕಲ್ಲು ಮಳೆಯಾದ ಕಾರಣ ಬೆಳೆ ನಷ್ಟವಾಗಿತ್ತು. ಇದರ ಮಧ್ಯೆ ಭಾರತೀಯ ಹವಾಮಾನ ಇಲಾಖೆ ಮತ್ತೊಂದು ಮಾಹಿತಿ ನೀಡಿದೆ.

ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದ್ದು, ಅಲ್ಲದೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...