alex Certify ಗಮನಿಸಿ: ಈ ದಿನಗಳಂದು ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟ ‘ಬಂದ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಈ ದಿನಗಳಂದು ಶಿವಮೊಗ್ಗ ನಗರದಲ್ಲಿ ಮದ್ಯ ಮಾರಾಟ ‘ಬಂದ್’

ಪ್ರಸ್ತುತ ಗಣೇಶ ವಿಸರ್ಜನೆ ನಡೆಯುತ್ತಿದ್ದು, ಇದರ ಜೊತೆಗೆ ಈದ್ ಮಿಲಾದ್ ಹಬ್ಬವೂ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೆಲವೊಂದು ಕ್ರಮಗಳನ್ನು ಕೈಗೊಳ್ಳಲಾಗಿದೆ.

ವಾಹನ ಸಂಚಾರ ಕುರಿತಂತೆ ಈಗಾಗಲೇ ಶಿವಮೊಗ್ಗ ಜಿಲ್ಲಾಧಿಕಾರಿಯವರು ಸೂಚನೆಗಳನ್ನು ಹೊರಡಿಸಿದ್ದು, ಇದರ ಮಧ್ಯೆ ಮದ್ಯ ಮಾರಾಟ ನಿಷೇಧ ಕುರಿತಂತೆ ನಿರ್ಬಂಧಗಳನ್ನು ಹೇರಲಾಗಿದೆ.

ಪರಿಷ್ಕೃತ ಆದೇಶದಂತೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 27ರ ಸಂಜೆ 6 ಗಂಟೆಯಿಂದ ಸೆಪ್ಟೆಂಬರ್ 29ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ. ಅದೇ ರೀತಿ ಸೆಪ್ಟೆಂಬರ್ 30ರ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 2ರ ಬೆಳಿಗ್ಗೆ 6 ಗಂಟೆವರೆಗೆ ಮದ್ಯ ಮಾರಾಟದ ಮೇಲೆ ನಿರ್ಬಂಧ ಹೇರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...