ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದ್ದು, ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇದೀಗ ಮಳೆ ಚುರುಕು ಪಡೆದುಕೊಳ್ಳುತ್ತಿದ್ದು, ಹವಾಮಾನ ಇಲಾಖೆ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶುಕ್ರವಾರದಂದು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಶನಿವಾರವೂ ಸಹ ಈ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಮುಂದುವರೆಯಲಿದೆ.
ಇನ್ನುಳಿದಂತೆ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಕರಾವಳಿಯಲ್ಲಿ ಅತಿ ವೇಗವಾಗಿ ಬಿರುಗಾಳಿ ಬೀಸುವ ಸಂಭವವಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.