ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದ ಜೊತೆಗೆ ಸಿಇಟಿ ಫಲಿತಾಂಶವೂ ಈಗಾಗಲೇ ಪ್ರಕಟಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಪಡೆಯುತ್ತಿದ್ದಾರೆ. ಇದರ ಮಧ್ಯೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ.
ಅಗತ್ಯ ಮೂಲ ಸೌಕರ್ಯ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಇಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಪ್ರವೇಶ ಪಡೆಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಈ ಕಾಲೇಜುಗಳಲ್ಲಿ ಸೀಟು ಹಂಚಿಕೆ ಮಾಡದಂತೆ ಕರ್ನಾಟಕ ಪರೀಕ್ಷಾ ಪ್ರಾಧಕಾರಕ್ಕೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮನವಿ ಮಾಡಿದೆ.
ಮಾನ್ಯತೆ ಕಳೆದುಕೊಂಡಿರುವ ನಾಲ್ಕು ಇಂಜಿನಿಯರಿಂಗ್ ಕಾಲೇಜುಗಳ ಪಟ್ಟಿ ಇಂತಿದ್ದು, ಕಾರವಾರದ ಗಿರಿಜಾಬಾಯಿ ಸೈಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರಿನ ಅಚ್ಯುತಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆಜಿಎಫ್ ನ ಶ್ರೀ ವಿನಾಯಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ತಿಪಟೂರಿನ ಶ್ರೀ ಬಸವೇಶ್ವರ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಾನ್ಯತೆ ಕಳೆದುಕೊಂಡಿವೆ.