ಹೈಕೋರ್ಟಿಗೆ ಏಪ್ರಿಲ್ 24 ರಿಂದ ಮೇ 20ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ತುರ್ತು ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುತ್ತದೆ.
ತುರ್ತು ಪ್ರಕರಣಗಳ ವಿಚಾರಣೆಗಾಗಿ ಬೆಂಗಳೂರಿನ ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿಯ ವಿಭಾಗಿಯ ಮತ್ತು ಏಕ ಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ.
ಮಧ್ಯಂತರ ನಿರ್ದೇಶನ, ತಾತ್ಕಾಲಿಕ ಪ್ರತಿಬಂಧಕ ಆದೇಶ ಮತ್ತು ತಡೆಯಾಜ್ಞೆ ಸೇರಿದಂತೆ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ಈ ಅವಧಿಯಲ್ಲಿ ನಡೆಸಲಾಗುತ್ತಿದ್ದು, ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಎಂ. ಚಂದ್ರಶೇಖರ್ ರೆಡ್ಡಿ ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ.