ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವ್ಯಾಪ್ತಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆ ಅಡಿ ಸೌಲಭ್ಯ ಒದಗಿಸಲಾಗುತ್ತದೆ.
ಆನ್ಲೈನ್ ಮೂಲಕ ಇದರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 5ರ ವರೆಗೆ ವಿಸ್ತರಿಸಲಾಗಿದೆ.
ಹಾಗೆಯೇ ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆ ಅಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನೂ ಸಹ ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.