ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಉಂಟಾಗುವ ಬೆಳೆ ಹಾನಿಗೆ ಪರಿಹಾರ ನೀಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಯೋಜನೆ ಅಡಿ ಪರಿಹಾರ ಪಡೆಯಲು ರೈತರು ಜುಲೈ 31ರೊಳಗೆ ಬ್ಯಾಂಕುಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕಿದೆ.
ಹವಾಮಾನ ವೈಪರಿತ್ಯದಿಂದ ಮಳೆ ಹೆಚ್ಚಾದಲ್ಲಿ ಅಥವಾ ಸರಿಯಾಗಿ ಮಳೆಯಾಗದೆ ಬೆಳೆ ಹಾನಿ ಉಂಟಾದರೆ ಬೆಳೆ ವಿಮೆ ಕಂತು ಪಾವತಿಸಿದ ರೈತರು 72 ತಾಸಿನಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ. ವೈಯಕ್ತಿಕ ಹಾನಿ ಪ್ರಮಾಣ ಅಥವಾ ಇಳುವರಿ ಆಧಾರದ ಮೇಲೆ ವಿಮೆ ಪರಿಹಾರವನ್ನು ರೈತರಿಗೆ ನೀಡಲಾಗುತ್ತದೆ.