ಬೆಂಗಳೂರು: ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಧಾರಾಕಾರ ಮಳೆ ಕೊಂಚ ಬ್ರೇಕ್ ಪಡೆದುಕೊಂಡಿದ್ದು, ಎರಡು ದಿನಗಳ ಬಳಿಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಚಂಡಮಾರುತ ಕೂಡ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ನವೆಂಬರ್ 26ರಿಂದ ಡಿಸೆಂಬರ್ 15ರವರೆಗೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಪುದುಚೆರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ವರುಣಾರ್ಭಟ ಜೋರಾಗಲಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ.
ಟೆಸ್ಲಾ ಸ್ವಯಂ-ಚಾಲನೆ ಫೀಚರ್ ಪರೀಕ್ಷಿಸಿ ನೋಡಿದ ಸಿಎನ್‌ಎನ್ ವರದಿಗಾರ ಹೇಳಿದ್ದೇನು ಗೊತ್ತಾ…?
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೈಕ್ಲೋನ್ ಆಗಿ ಬದಲಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಕೇರಳ, ಆಂಧ್ರಪ್ರದೇಶ ಕರಾವಳಿ, ಪುದುಚೆರಿ, ನೆಲ್ಲೂರು ಭಾಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ತಗ್ಗಿದೆಯಾದರೂ ನೆರೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದಲ್ಲಿಯೂ ನ.26 ರಂದು ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.