ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಬಾರಿ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಜನರು ಮಳೆಯಿಂದ ತತ್ತರಿಸಿದ್ದಾರೆ. ಉತ್ತರ ಕರ್ನಾಟಕದಲ್ಲೂ ಈಗ ಮಳೆ ಅಬ್ಬರಿಸುತ್ತಿದ್ದು, ನೆರೆ ಭೀತಿಯೂ ಎದುರಾಗಿದೆ.
ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಪರಿಸ್ಥಿತಿಯನ್ನು ಅವಲೋಕಿಸಿ ಆಯಾ ಶಾಲೆಗಳ ಮುಖ್ಯೋಪಾಧ್ಯಾಯರೇ ರಜೆ ಕುರಿತು ತೀರ್ಮಾನಿಸಬಹುದೆಂದು ಶಿಕ್ಷಣ ಇಲಾಖೆ ಈಗಾಗಲೇ ಸೂಚನೆ ನೀಡಿದೆ.
ಇದೀಗ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.