ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವ ಕುರಿತಂತೆ ಈಗಾಗಲೇ ಆದಾಯ ತೆರಿಗೆ ಇಲಾಖೆ ಹಲವು ಬಾರಿ ಸೂಚನೆಗಳನ್ನು ನೀಡಿದೆ. ಅಲ್ಲದೆ ದಿನಾಂಕಗಳನ್ನು ಸಹ ಈ ಹಿಂದೆ ಮುಂದೂಡಲಾಗಿದ್ದು, ಇದೀಗ 31 ಮಾರ್ಚ್ 2023 ಕೊನೆಯ ದಿನಾಂಕವಾಗಿದೆ.
ಪಾನ್ ಜೊತೆ ಆಧಾರ್ ಲಿಂಕ್ ಮಾಡಲು ರೂ.1000 ವಿಳಂಬ ಶುಲ್ಕ ಪಾವತಿಸಬೇಕಾಗುತ್ತದೆ. ಜೊತೆಗೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಕುರಿತ ಮಾಹಿತಿ ಇಲ್ಲಿದೆ.
ಆಧಾರ್ ಜೊತೆ ಪಾನ್ ಲಿಂಕ್ ಮಾಡದಿದ್ದರೆ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಬಹುದು.
ಇದರಿಂದಾಗಿ ಐಟಿಆರ್ ಸಲ್ಲಿಸಲು ಸಾಧ್ಯವಾಗುವುದಿಲ್ಲ.
ಬಾಕಿ ಉಳಿದಿರುವ ರಿಟರ್ನ್ಸ್ ಸಂಸ್ಕರಿಸಲು ಕೂಡ ಸಾಧ್ಯವಾಗುವುದಿಲ್ಲ.
ಬಾಕಿ ಇರುವ ಆದಾಯ ತೆರಿಗೆ ಮರುಪಾವತಿ ಮಾಡಲಾಗುವುದಿಲ್ಲ.
ದೋಷಪೂರಿತ ರಿಟರ್ನ್ಸ್ ಸಲ್ಲಿಕೆಯಿಂದಾಗಿ ಬಾಕಿ ಉಳಿದಿರುವ ಸಂಸ್ಕರಣ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ.
ಗರಿಷ್ಠ ದರದಲ್ಲಿ ತೆರಿಗೆ ಕಡಿತ ಉಂಟಾಗುತ್ತದೆ.