ಗುರುವಾರದಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವಾರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹುತಾತ್ಮ ಯೋಧರ ಅವಲಂಬಿತರಿಗೆ ಇನ್ನು ಮುಂದೆ ಸರ್ಕಾರಿ ನೌಕರಿ ನೀಡಲು ನಿರ್ಧರಿಸಲಾಗಿದೆ.
ಅಲ್ಲದೆ ‘ರೈತ ವಿದ್ಯಾನಿಧಿ’ ಯೋಜನೆಯನ್ನು ಕೃಷಿ ಕಾರ್ಮಿಕರ ಮಕ್ಕಳಿಗೂ ಸಹ ವಿಸ್ತರಣೆ ಮಾಡಲಾಗಿದ್ದು, ಇದರ ಜೊತೆಗೆ ಡಿ ವರ್ಗದ ನೇಮಕಾತಿ ಕುರಿತಂತೆಯೂ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ.
ಕೆಪಿಎಸ್ಸಿ ಮೂಲಕ ನೇಮಕ ಮಾಡುವ ಡಿ ವರ್ಗದ ಎಲ್ಲ ನೇಮಕಾತಿಗಳನ್ನು ಮೌಖಿಕ ಸಂದರ್ಶನ ನಡೆಸದೆ ಕೇವಲ ಲಿಖಿತ ಪರೀಕ್ಷೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ.