ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗೆ ತಿದ್ದುಪಡಿ ಮಾಡಲು ಇಂದು ಅಂತಿಮ ದಿನವಾಗಿದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಮಾಡಿರಬಹುದಾದ ತಪ್ಪುಗಳನ್ನು ತಿದ್ದುಪಡಿ ಮಾಡಲು ಇಂದು ಸಂಜೆ ಐದು ಗಂಟೆಯವರೆಗೆ ಅವಕಾಶವಿದ್ದು, ವೆಬ್ ಸೈಟ್ ನಲ್ಲಿ ತಮ್ಮ ಲಾಗಿನ್ ಮೂಲಕ ಇದನ್ನು ಸರಿಪಡಿಸಬಹುದಾಗಿದೆ.
ಕೆಲ ವಿದ್ಯಾರ್ಥಿಗಳು ತಮ್ಮ ಹೆಸರು, ಪೋಷಕರ ಹೆಸರು, ವಿಳಾಸ ಸೇರಿದಂತೆ ಮತ್ತಿತರ ದಾಖಲೆಗಳನ್ನು ಸಲ್ಲಿಸುವಾಗ ತಪ್ಪುಗಳನ್ನು ಮಾಡಿರುವುದು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೊಂದು ಅವಕಾಶ ನೀಡಿದೆ.