ಗಳಿಕೆ ರಜೆ ನಗದೀಕರಣ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಲಾಗಿದೆ.
2023 ರ ಜನವರಿ 1ರಿಂದ ವರ್ಷ ಮುಗಿಯುವುದರೊಳಗಾಗಿ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣದ ಸೌಲಭ್ಯ ಪಡೆಯಬಹುದಾಗಿದ್ದು, ಇದಕ್ಕಾಗಿ ಒಂದು ತಿಂಗಳ ಮುಂಚಿತವಾಗಿ ನೋಟಿಸ್ ನೀಡಬೇಕಾಗುತ್ತದೆ.
ಎಲ್ಲ ವರ್ಗದ ಅಧಿಕಾರಿ/ನೌಕರರಿಗೆ ಇದು ಅನ್ವಯವಾಗಲಿದ್ದು, ಗೆಜೆಟೆಡ್ ಅಧಿಕಾರಿಗಳ ವಿಷಯದಲ್ಲಿ 2023 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ HRMS ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮ ವಹಿಸಲಿದ್ದಾರೆ.