alex Certify ಗಳಿಕೆ ರಜೆ ನಗದೀಕರಣ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಳಿಕೆ ರಜೆ ನಗದೀಕರಣ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಗಳಿಕೆ ರಜೆ ನಗದೀಕರಣ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಲಾಗಿದೆ.

2023 ರ ಜನವರಿ 1ರಿಂದ ವರ್ಷ ಮುಗಿಯುವುದರೊಳಗಾಗಿ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣದ ಸೌಲಭ್ಯ ಪಡೆಯಬಹುದಾಗಿದ್ದು, ಇದಕ್ಕಾಗಿ ಒಂದು ತಿಂಗಳ ಮುಂಚಿತವಾಗಿ ನೋಟಿಸ್ ನೀಡಬೇಕಾಗುತ್ತದೆ.

ಎಲ್ಲ ವರ್ಗದ ಅಧಿಕಾರಿ/ನೌಕರರಿಗೆ ಇದು ಅನ್ವಯವಾಗಲಿದ್ದು, ಗೆಜೆಟೆಡ್ ಅಧಿಕಾರಿಗಳ ವಿಷಯದಲ್ಲಿ 2023 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ HRMS ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮ ವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...