
ಸೂರ ನಿರ್ದೇಶನದ ಶ್ರೀನಗರ ಕಿಟ್ಟಿ ನಟನೆಯ ಬಹು ನಿರೀಕ್ಷೆಯ ಗೌಳಿ ಚಿತ್ರದ ಎರಡನೇ ಹಾಡನ್ನು ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.
ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಗೂ ಶ್ರುತಿ ಪ್ರಹ್ಲಾದ್ ಧ್ವನಿಯಲ್ಲಿ ಮೂಡಿ ಬರಲಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ ಸಂಗೀತ ಹಾಗೂ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬೆಳಿಗ್ಗೆ 11:52ಕ್ಕೆ ಈ ಹಾಡು ರಿಲೀಸ್ ಆಗಲಿದೆ
ಸೋಹನ್ ಫಿಲ್ಮ್ ಫ್ಯಾಕ್ಟರಿ ಲಾಂಛನದಲ್ಲಿ ರಘು ಸಿಂಗಂ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಶ್ರೀನಗರ ಕಿಟ್ಟಿ ಅವರಿಗೆ ಜೋಡಿಯಾಗಿ ಪಾವನಾ ಗೌಡ ಅಭಿನಯಿಸಿದ್ದಾರೆ. ರಂಗಾಯಣ ರಘು. ಯಶ್ ಶೆಟ್ಟಿ, ಕಾಕ್ರೋಚ್ ಸುಧಿ, ಶಿವಣ್ಣ ರುದ್ರೇಶ್, ಶರತ್ ಲೋಹಿತಾಶ್ವ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.
