ಪ್ರಹ್ಲಾದ್ ಜೋಶಿಯವರ ನವಗ್ರಹ ಯಾತ್ರೆ ಹೇಳಿಕೆಗೆ ತಿರುಗೇಟು ನೀಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮರಾಠ ಪೇಶ್ವೆ ಡಿಎನ್ಎ ಇರುವ ವ್ಯಕ್ತಿಯನ್ನು ಆರ್ ಎಸ್ ಎಸ್ ಮತ್ತು ಬಿಜೆಪಿ ಮುಖ್ಯಮಂತ್ರಿಯನ್ನಾಗಿ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದರು.
ಆದರೆ ಈ ವಿಚಾರ ಈಗ ಕುಮಾರಸ್ವಾಮಿಯವರು ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂಬ ತಿರುವು ತೆಗೆದುಕೊಳ್ಳುತ್ತಿದ್ದಂತೆ ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ರಾಜ್ಯದ ಬ್ರಾಹ್ಮಣರ ವಿರುದ್ಧ ಟೀಕೆ ಮಾಡಿಲ್ಲ. ಪ್ರಹ್ಲಾದ್ ಜೋಶಿಯವರಿಗೆ ಸಂಬಂಧಿಸಿದಂತೆ ಮಾತ್ರ ಆ ಹೇಳಿಕೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಮಕೃಷ್ಣ ಹೆಗಡೆಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೆ ದೇವೇಗೌಡರು ಎಂದು ಹೇಳಿರುವ ಕುಮಾರಸ್ವಾಮಿ, ಬಿಜೆಪಿಯವರಿಗೆ ರಾಜ್ಯದಲ್ಲಿ ಅಭಿವೃದ್ಧಿ ಹಾಗೂ ಶಾಂತಿ ನೆಲೆಸುವುದು ಬೇಕಿಲ್ಲ. ಗಾಂಧೀಜಿಯವರನ್ನು ಕೊಂದ ವ್ಯಕ್ತಿಯ ದೇವಸ್ಥಾನ ಕಟ್ಟಲು ಹೊರಟಿದ್ದಾರೆ ಎಂದು ಮತ್ತೆ ಕಿಡಿ ಕಾರಿದ್ದಾರೆ.