alex Certify ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಗಳಿಗೆ ಬಂಪರ್ ಗಿಫ್ಟ್…! ವನಿತಾ ಯೋಜನೆಯಡಿ ಉಚಿತ ಬಸ್‌ ಪಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಗಳಿಗೆ ಬಂಪರ್ ಗಿಫ್ಟ್…! ವನಿತಾ ಯೋಜನೆಯಡಿ ಉಚಿತ ಬಸ್‌ ಪಾಸ್

ಬೆಂಗಳೂರು: ರಾಜ್ಯ ಸರ್ಕಾರವು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಬಂಪರ್ ಗಿಫ್ಟ್ ಘೋಷಿಸಿದೆ.

ಮುಂದಿನ ತಿಂಗಳಿನಿಂದ ವನಿತಾ ಯೋಜನೆಯ ಮೂಲಕ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಬಿಎಂಟಿಸಿ ಬಸ್ ನಲ್ಲಿ ಸಂಚರಿಸಲು ಉಚಿತ ಪಾಸ್ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪ್ರಸ್ತುತ ಸುಮಾರು 850ಕ್ಕಿಂತ ಹೆಚ್ಚು ಗಾರ್ಮೆಂಟ್ಸ್ ಗಳು ಕಾರ್ಯ ನಿರ್ವಹಿಸುತ್ತಿದ್ದು, ಸುಮಾರು 3 ಲಕ್ಷಕ್ಕೂ ಅಧಿಕ ಮಹಿಳೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಈ ಕಾರ್ಮಿಕರಿಗೆ ಆರ್ಥಿಕ ಸಹಾಯ ಹಾಗೂ ಭದ್ರತೆ ಒದಗಿಸುವ ಉದ್ಧೇಶದಿಂದ ಸರ್ಕಾರ ಈ ಯೋಜನೆಗೆ ಕೈ ಹಾಕಿದೆ.

ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರ ಪಟ್ಟಿಯನ್ನು ಆಯಾ ಗಾರ್ಮೆಂಟ್ಸ್ ಮಾಲೀಕರು ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ಇ – ಮೇಲ್ welfarecommissioner123@gmail.com ವಿಳಾಸಕ್ಕೆ ಕಳುಹಿಸಿದ ನಂತರ ಕಾರ್ಮಿಕ ಕಲ್ಯಾಣ ಮಂಡಳಿ ಪರಿಶೀಲನೆ ನಡೆಸಿ, ಅರ್ಹ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಬಿಎಂಟಿಸಿಗೆ ಕಳುಹಿಸುತ್ತದೆ.

ಆ ನಂತರ ಅಗತ್ಯ ದಾಖಲೆಗಳೊಂದಿಗೆ ಹಾಗೂ ಗಾರ್ಮೆಂಟ್ಸ್ ಮಾಲೀಕರ ಪಾಲಿನ ಶೇ. 40ರಷ್ಟು ಹಣದೊಂದಿಗೆ ಮೆಜೆಸ್ಟಿಕ್ ನಲ್ಲಿರುವ ಕೌಂಟರ್ ನಲ್ಲಿ ಪಾಸುಗಳನ್ನು ಪಡೆಯಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...