ಹುಬ್ಬಳ್ಳಿ: ಬಿಜೆಪಿ ನಾಯಕರು ಬಂದೂಕಿನಲ್ಲಿ ಗುಂಡು ಹಾರಿಸಿ ಸಂಭ್ರಮಿಸಿ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಇದರಿಂದ ಸರ್ಕಾರ ಜನರಿಗೆ ನೀಡುತ್ತಿರುವ ಸಂದೇಶಗಳೇನು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ, ಸ್ವತಃ ಬಿಜೆಪಿ ನಾಯಕರೇ ಸಭೆ, ಸಮಾರಂಭಗಳನ್ನು ಮಾಡುತ್ತಿದ್ದಾರೆ. ಹಾರ, ತುರಾಯಿ ಜೊತೆಗೆ ಗುಂಡು ಹಾರಿಸಿ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಇದರಿಂದ ಆಗುವ ಪರಿಣಾಮಗಳೇನು ? ರಾಜಕೀಯ ನಾಯಕರೇ ನಿಯಮಗಳನ್ನು ಉಲ್ಲಂಘನೆ ಮಾಡುವುದು ಎಷ್ಟು ಸರಿ ? ಎಂದು ಪ್ರಶ್ನಿಸಿದರು.
ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಅರೆನಗ್ನ ಶವ ಪತ್ತೆ
ಕೃಷ್ಣಾ ಮೇಲ್ಡಂಡೆ, ಮಹದಾಯಿ, ಎತ್ತಿನಹೊಳೆ ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಗಳನ್ನು ಮಾಡುತ್ತೇವೆ. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ನ್ಯಾಯ ಸಿಗುತ್ತಿಲ್ಲ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಕೇಂದ್ರ ಸರ್ಕಾರದ ಕಣ್ಣು ತೆರೆಸಲು ಜೆಡಿಎಸ್ ಹೋರಾಟ ನಡೆಸಲು ಮುಂದಾಗಿದೆ ಎಂದರು.
ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ 65-70 ವಾರ್ಡ್ ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಹಲವಾರು ವಿದ್ಯಾವಂತರಿಗೆ ಟಿಕೆಟ್ ನೀಡುತ್ತೇವೆ ಎಂದು ಹೇಳಿದರು.