alex Certify ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ ಆಡಳಿತರೂಢ ಬಿಜೆಪಿಗೆ ಆಘಾತ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಶಂಕರ ಸಿಂಹ ವಘೇಲಾ ಅವರ ಪುತ್ರ ಮಹೇಂದ್ರ ಸಿಂಹ ವಘೇಲಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಶುಕ್ರವಾರದಂದು ಅಹಮದಾಬಾದ್ ನ ಪಕ್ಷದ ಕೇಂದ್ರ ಕಚೇರಿಯಲ್ಲಿ ಗುಜರಾತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಗದೀಶ್ ಠಾಕೂರ್ ಸಮ್ಮುಖದಲ್ಲಿ ಶಂಕರ ಸಿಂಹ ವಘೇಲಾ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

2012ರಲ್ಲಿ ಬಾಯಡ್ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ಮಹೇಂದ್ರ ಸಿಂಹ ವಘೇಲಾ, ಬಳಿಕ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಗುಜರಾತ್ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಈಗ ಮತ್ತೆ ಕಾಂಗ್ರೆಸ್ಸಿಗೆ ಮರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...