alex Certify ಗುಜರಾತ್ ವಿಧಾನಸಭಾ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯವಾದ ಬೆನ್ನಲ್ಲೇ ಮನೆ ಮನೆಗಳಿಗೆ ತೆರಳಿ ಅಭ್ಯರ್ಥಿಗಳಿಂದ ಮತಯಾಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಾತ್ ವಿಧಾನಸಭಾ ಚುನಾವಣೆ: ಬಹಿರಂಗ ಪ್ರಚಾರ ಅಂತ್ಯವಾದ ಬೆನ್ನಲ್ಲೇ ಮನೆ ಮನೆಗಳಿಗೆ ತೆರಳಿ ಅಭ್ಯರ್ಥಿಗಳಿಂದ ಮತಯಾಚನೆ

ಡಿಸೆಂಬರ್ 1 ರಂದು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಇಂದಿನಿಂದ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ.

ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಉಳಿದ 93 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಡಿಸೆಂಬರ್ 5 ರಂದು ನಡೆಯಲಿದೆ. ಡಿಸೆಂಬರ್ 8ರಂದು ಎಲ್ಲ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ.

ಮೊದಲ ಹಂತದ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ಈಗ ಮತದಾರರ ಮನೆ ಬಾಗಿಲು ಎಡತಾಕುತ್ತಿದ್ದು, ಯಾರಿಗೆ ಜಯಮಾಲೆ ಬೀಳಲಿದೆ ಎಂಬುದು ಡಿಸೆಂಬರ್ 8ರಂದು ತಿಳಿಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...