alex Certify ಗುಜರಾತ್ ವಿಧಾನಸಭೆಗೆ ನಾಳೆ 2 ನೇ ಹಂತದ ‘ಮತದಾನ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಾತ್ ವಿಧಾನಸಭೆಗೆ ನಾಳೆ 2 ನೇ ಹಂತದ ‘ಮತದಾನ’

ಗುಜರಾತ್ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೊದಲ ಹಂತದ ಮತದಾನ ಮುಗಿದಿದ್ದು, ನಾಳೆ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ. ಒಟ್ಟು 93 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 833 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಒಟ್ಟು 14 ಜಿಲ್ಲೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಮತದಾರರ ಮನವೊಲಿಸಲು ಅಭ್ಯರ್ಥಿಗಳು ಅಂತಿಮ ಕಸರತ್ತಿನಲ್ಲಿ ತೊಡಗಿದ್ದು, ಬೆಂಬಲಿಗರ ಜೊತೆ ಮನೆಮನೆಗಳಿಗೆ ಭೇಟಿ ನೀಡುತ್ತಿದ್ದಾರೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕಣಕ್ಕಿಳಿದಿರುವ ಘಾಟ್ಲೋಡಿಯ ಕ್ಷೇತ್ರ, ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಸ್ಪರ್ಧಿಸಿರುವ ವಿರಾಮ್ ಗಮ್ ಕ್ಷೇತ್ರ ಹಾಗೂ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್ ಸ್ಪರ್ಧಿಸಿರುವ ಗಾಂಧಿನಗರ ದಕ್ಷಿಣ ಕ್ಷೇತ್ರದಲ್ಲಿ ನಾಳೆ ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...