alex Certify ಗುಮ್ಮಕಲ್ಲು ಗುಡ್ಡದಲ್ಲಿ ಬಂಡೆ ಕುಸಿತ; 6 ಕಾರ್ಮಿಕರು ನಾಪತ್ತೆ; ಸಾವಿನ ಶಂಕೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಮ್ಮಕಲ್ಲು ಗುಡ್ಡದಲ್ಲಿ ಬಂಡೆ ಕುಸಿತ; 6 ಕಾರ್ಮಿಕರು ನಾಪತ್ತೆ; ಸಾವಿನ ಶಂಕೆ…?

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಮ್ಮಕಲ್ಲು ಗುಡ್ಡದಲ್ಲಿ ಟಿಪ್ಪರ್ ಮೇಲೆ ಬಂಡೆ ಕುಸಿದು ಬಿದ್ದ ಪರಿಣಾಮ ಹಲವು ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಕಲ್ಲು ಕ್ವಾರಿಯಲ್ಲಿ ಟಿಪ್ಪರ್ ಮೇಲೆ ಬಂಡೆ ಏಕಾಏಕಿ ಕುಸಿದು ಬಿದ್ದಿದ್ದು, ಸುಮಾರು 6 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಎಲ್ಲಾ ಕಾರ್ಮಿಕರು ಬಂಡೆ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚಾರಣೆ ಆರಂಭಿಸಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಮಹೇಂದ್ರಪ್ಪ ಎಂಬುವವರ ಜಾಗದಲ್ಲಿ ಹಕೀಮ್ ಎಂಬುವವರು ಗುತ್ತಿಗೆ ಆಧಾರದಲ್ಲಿ ಗಣಿಗಾರಿಕೆ ನಡೆಸಿದ್ದು, ಬಂಡೆ ಕುಸಿದು ಬಿದ್ದಿದೆ. ಪಶ್ಚಿಮ ಬಂಗಾಳ ಮೂಲದ 6 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...