alex Certify ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಕೇಸ್; ಠೇವಣಿದಾರರಿಗೆ 5 ಲಕ್ಷ ಹಣ ಸಂದಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಕೇಸ್; ಠೇವಣಿದಾರರಿಗೆ 5 ಲಕ್ಷ ಹಣ ಸಂದಾಯ

ನವದೆಹಲಿ: ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ನ ಠೇವಣಿದಾರರಿಗೆ 5 ಲಕ್ಷದವರೆಗೆ ಹಣ ಸಂದಾಯ ಮಾಡಲಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ನ ಠೇವಣಿದಾರರಿಗೆ 5 ಲಕ್ಷ ರೂ.ವರೆಗಿನ ಠೇವಣಿ ವಿಮೆ ಮೊತ್ತವನ್ನು ಮರುಪಾವತಿ ಮಾಡಲಾಗಿದೆ ಎಂದರು.

ಒಂದೇ ದಿನದಲ್ಲಿ 12,014 ಠೇವಣಿದಾರರಿಗೆ ಖಾತರಿ ಮತ್ತು ಸಾಲ ಖಾತರಿ ನಿಗಮ (ತಿದ್ದುಪಡಿ) ಮಸೂದೆ-2021ರ ಅನ್ವಯ 401 ಕೋಟಿ ರೂ.ಗಳಷ್ಟು ಮೊತ್ತ ಠೇವಣಿದಾರ ಖಾತೆಗಳಿಗೆ ಠೇವಣಿ ವಿಮಾ ಮೊತ್ತ ಸಂದಾಯವಾಗಿದೆ. ಉಳಿದ ಠೇವಣಿದಾರರಿಗೆ ಈ ವಾರದಲ್ಲಿ ಹಣ ಸಂದಾಯವಾಗಲಿದೆ ಎಂದು ತಿಳಿಸಿದರು.

ಈ ಮೂಲಕ ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರ ಸಂಕಷ್ಟಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತುರ್ತಾಗಿ ಸ್ಪಂದಿಸಿ ಪೂರಕ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...