‘ಗೃಹಜ್ಯೋತಿ’ ನೋಂದಣಿಗೆ ಹೆಚ್ಚುವರಿ ಶುಲ್ಕ ವಸೂಲಿ; ಸರ್ಕಾರದಿಂದ ಖಡಕ್ ಎಚ್ಚರಿಕೆ

ಉಚಿತ ವಿದ್ಯುತ್ ನೀಡುವ ಘೋಷಣೆಯಂತೆ ರಾಜ್ಯ ಸರ್ಕಾರ ‘ಗೃಹಜ್ಯೋತಿ’ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ನೋಂದಾಯಿಸಲು ಸೂಚನೆ ನೀಡಲಾಗಿದೆ. ಆನ್ಲೈನ್ ಮೂಲಕ, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಇದರ ನೋಂದಣಿ ಮಾಡಬಹುದಾಗಿದೆ.

ಗೃಹಜ್ಯೋತಿ ನೋಂದಣಿ ಸಂಪೂರ್ಣವಾಗಿ ಉಚಿತವಾಗಿದ್ದು, ಆದರೆ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ 20 ರೂಪಾಯಿ ಸೇವಾ ಶುಲ್ಕವನ್ನು ವಿಧಿಸಲು ಸೂಚನೆ ನೀಡಲಾಗಿದೆ ಇದರ ಮಧ್ಯೆಯೂ ನಿಗದಿತಕ್ಕಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಹಲವು ದೂರುಗಳು ಕೇಳಿ ಬಂದಿದ್ದವು.

ಈ ಹಿನ್ನೆಲೆಯಲ್ಲಿ ಹೆಚ್ಚಿನ ಹಣ ವಸೂಲಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಖಡಕ್ ಎಚ್ಚರಿಕೆಯನ್ನು ಸರ್ಕಾರ ನೀಡಿದ್ದು, ಈ ರೀತಿ ಹಣ ಕೇಳಿದರೆ ಸಾರ್ವಜನಿಕರು ಸಹ 1912 ಸಹಾಯವಾಣಿಗೆ ಕರೆ ಮಾಡುವ ಮೂಲಕ ದೂರು ನೀಡಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read