ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ, 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ‘ಗೃಹಜ್ಯೋತಿ’ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದ್ದು, ಅರ್ಜಿ ಸ್ವೀಕಾರ ಆರಂಭವಾಗಿದೆ.
ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಂಡವರು ತಮ್ಮ ಅರ್ಜಿಯ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಇಂಧನ ಇಲಾಖೆ, ಅಂತರ್ಜಾಲ ಲಿಂಕ್ ಬಿಡುಗಡೆ ಮಾಡಿದ್ದು ಇದರ ಮಾಹಿತಿ ಇಲ್ಲಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/statucTrack/Track_Status ಮೂಲಕ ಪರಿಶೀಲಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.