alex Certify ಗೆಳತಿಗೆ ನೋಟ್ಸ್ ನೀಡಲು ಬಂದ ಅಪ್ರಾಪ್ತೆಯ ಮೇಲೆಯೇ ಕಣ್ಣು ಹಾಕಿದ ಪಾಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೆಳತಿಗೆ ನೋಟ್ಸ್ ನೀಡಲು ಬಂದ ಅಪ್ರಾಪ್ತೆಯ ಮೇಲೆಯೇ ಕಣ್ಣು ಹಾಕಿದ ಪಾಪಿ

 

ತುಮಕೂರು : ಸ್ನೇಹಿತೆಯ ಮನೆಗೆ ನೋಟ್ಸ್ ನೀಡಲು ಬಂದಿದ್ದ ಅಪ್ರಾಪ್ತೆಯ ಮೇಲೆಯೇ ಅತ್ಯಾಚಾರ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಸದ್ಯ ಪೊಲೀಸರು ಕಾರಣನಾದ ಪಾಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

ಈ ಘಟನೆ ಜಿಲ್ಲೆಯ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಅಸ್ಲಾಂನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯು ತನ್ನ ಗೆಳತಿಗೆ ನೋಟ್ಸ್ ನೀಡಲು ಅವರ ಮನೆಗೆ ಹೋಗಿದ್ದಳು. ಈ ಸಂದರ್ಭದಲ್ಲಿ ಪಾಪಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಚಳಿಗಾಲದ ಸೋಮಾರಿತನ ಹೀಗೆ ಹೋಗಲಾಡಿಸಿ

ಕುಡಿಯುವ ನೀರಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ನೀಡಿ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಆ ನಂತರ ವಿಷಯ ಯಾರಿಗೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದಾನೆ. ಆದರೆ, ಬಾಲಕಿಯ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿದೆ. ಹೀಗಾಗಿ ಆಸ್ಪತ್ರೆಗೆ ಹೋದಾಗ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಆಗ ಅಪ್ರಾಪ್ತೆ ವಿಷಯವನ್ನು ತಿಳಿಸಿದ್ದಾಳೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...