ಛತ್ತೀಸ್ ಗಡದ ಕಾಂಗ್ರೆಸ್ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನವೊಂದನ್ನು ಕೈಗೊಳ್ಳಲು ಮುಂದಾಗಿದೆ. ಗೋಮೂತ್ರವನ್ನು ಖರೀದಿಸಲು ಯೋಜನೆ ರೂಪಿಸಲಾಗಿದ್ದು, ಇದರಿಂದ ರೈತರು ಹೆಚ್ಚಿನ ಆದಾಯ ಗಳಿಸಲು ಸಹಾಯಕವಾಗಲಿದೆ ಎಂದು ತಿಳಿಸಿದೆ.
ಪ್ರತಿ ಲೀಟರ್ ಗೋಮೂತ್ರಕ್ಕೆ ನಾಲ್ಕು ರೂಪಾಯಿ ದರ ನಿಗದಿಪಡಿಸಲು ಚಿಂತನೆ ನಡೆಸಲಾಗಿದ್ದು, ‘ಗೋದಾನ ನ್ಯಾಯ’ ಯೋಜನೆ ಅಡಿ ಇದನ್ನು ರೈತರಿಂದ ಖರೀದಿಸಲಾಗುತ್ತದೆ. ಈ ಕುರಿತು ಮುಖ್ಯಮಂತ್ರಿ ಭೂಪೇಶ್ ಬಘೇಲ್ ನೇತೃತ್ವದ ಸರ್ಕಾರ ಮಾಹಿತಿ ನೀಡಿದೆ.
ಜುಲೈ 28ರಂದು ನಡೆಯಲಿರುವ ‘ಹರೇಲಿ ತಿಹಾರ್’ ಹಬ್ಬದ ಸಂದರ್ಭದಲ್ಲಿ ಯೋಜನೆಗೆ ಚಾಲನೆ ಸಿಗಲಿದ್ದು, ಈಗಾಗಲೇ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.