ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟ ಗೋಲ್ಡನ್ ಸ್ಟಾರ್ ಗಣೇಶ್ ಇಂದು 41 ನೇ ವಸಂತಕ್ಕೆ ಕಾಲಿಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಕಲಾವಿದರಿಂದ ಹಾಗೂ ಅವರ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಅವರ ಹುಟ್ಟುಹಬ್ಬದ ಪ್ರಯುಕ್ತ ನಿನ್ನೆಯೇ ‘ಸಖತ್’ ಸಿನಿಮಾದ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದ್ದಾರೆ. ಸಿಂಪಲ್ ಸುನಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಬೋಜಪುರಿಯ ಮತ್ತೊಂದು ಸಿನಿಮಾದಲ್ಲಿ ನಟಿ ಹರ್ಷಿಕಾ ಪೂಣಚ್ಚ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಗಾಳಿಪಟ 2’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಇಂದು ರಿಲೀಸ್ ಮಾಡಲಾಗಿದೆ. ಯೋಗರಾಜ್ ಭಟ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಇನ್ನು ಅವರ ‘ತ್ರಿಬಲ್ ರೈಡಿಂಗ್’ ಸಿನಿಮಾದ ಟೀಸರ್ ಅನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಬ್ಯುಸಿಯಾಗಿದ್ದಾರೆ.
https://www.instagram.com/p/CQyZSS3sfcN/?utm_medium=share_sheet
https://www.instagram.com/p/CQ0DMa5MxSq/?utm_source=ig_web_copy_link
https://www.instagram.com/p/CQ0HzqDnccx/?utm_source=ig_web_copy_link