ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳನ್ನು ಭೇಟಿಯಾದ ಸಿಎಂ ಬಸವರಾಜ್ ಬೊಮ್ಮಾಯಿ, ಗೋವಾದಲ್ಲಿ ಉತ್ತರ ಕರ್ನಾಟಕ ಭಾಗದ ಹಲವರು ನೆಲೆಸಿದ್ದಾರೆ. ಗೋವಾದಲ್ಲಿ ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿದ್ದಾರೆ. ಆದರೆ ಕನ್ನಡಿಗರಿಗೆ ಅಲ್ಲಿ ನೆಲೆಯಿಲ್ಲ. ಹೀಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಸಿದ್ಧವಿದೆ ಎಂದರು.
ಇಲ್ಲಿ ಸಿಗ್ತಾರೆ ಒಂದಕ್ಕಿಂತ ಹೆಚ್ಚು ಗರ್ಲ್ ಫ್ರೆಂಡ್..! ಹುಡುಗರ ಖರ್ಚು ಭರಿಸ್ತಾರೆ ಹುಡುಗಿಯರು
ಕನ್ನಡ ಭವನ ನಿರ್ಮಾಣಕ್ಕೆ ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ, ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಘೋಷಿಸಿದರು.