alex Certify ಗೌತಮ್ ಅದಾನಿ ಪತ್ನಿ ರಾಜ್ಯಸಭೆ ಪ್ರವೇಶಕ್ಕೆ ವೇದಿಕೆ ರೆಡಿ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೌತಮ್ ಅದಾನಿ ಪತ್ನಿ ರಾಜ್ಯಸಭೆ ಪ್ರವೇಶಕ್ಕೆ ವೇದಿಕೆ ರೆಡಿ….!

ರಾಜ್ಯಸಭೆಗೆ ಉದ್ಯಮಿಗಳು, ಕಲಾವಿದರು ಪ್ರವೇಶಿಸುವುದು ಹೊಸದೇನು ಅಲ್ಲ. ಇದೀಗ ಅಂತಹ ಮತ್ತೊಂದು ವೇದಿಕೆ ಸಜ್ಜಾಗುತ್ತಿದ್ದು, ವಿಶ್ವದ ಐದನೇ ಅತಿ ದೊಡ್ಡ ಸಿರಿವಂತ, ಆದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರ ಪತ್ನಿ ರಾಜ್ಯಸಭೆ ಪ್ರವೇಶಿಸಲಿದ್ದಾರೆ ಎಂದು ಹೇಳಲಾಗಿದೆ.

ಜೂನ್ 10ರಂದು ಆಂಧ್ರಪ್ರದೇಶದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ವೈ ಎಸ್ ಆರ್ ಕಾಂಗ್ರೆಸ್ ಪಕ್ಷ ಈ ಎಲ್ಲ ಸ್ಥಾನಗಳನ್ನು ಗೆಲ್ಲುವ ಸಾಮರ್ಥ್ಯ ಹೊಂದಿದೆ. ಹೀಗಾಗಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಈ ಕುರಿತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದ್ದು, ಇದಕ್ಕೆ ಅವರು ಸಹ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಗೌತಮ್ ಅದಾನಿ ಅಥವಾ ಅವರ ಪತ್ನಿ ಪ್ರೀತಿ ಅದಾನಿ ಆಂಧ್ರಪ್ರದೇಶದಿಂದ ರಾಜ್ಯಸಭೆ ಪ್ರವೇಶಿಸುವುದು ಖಚಿತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...