alex Certify ಗ್ಯಾರೇಜ್ ನಲ್ಲಿ ಬೆಂಕಿ ಅವಘಡ; 4 ಕಾರುಗಳು ಬೆಂಕಿಗಾಹುತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾರೇಜ್ ನಲ್ಲಿ ಬೆಂಕಿ ಅವಘಡ; 4 ಕಾರುಗಳು ಬೆಂಕಿಗಾಹುತಿ

ಬೆಂಗಳೂರು: ಗ್ಯಾರೇಜ್ ಒಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಗ್ಯಾರೇಜ್ ನಲ್ಲಿದ್ದ ನಾಲ್ಕು ಕಾರುಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಚನ್ನಸಂದ್ರದಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗ್ಯಾರೇಜ್ ನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಪಕ್ಕದಲ್ಲಿಯೇ ಇದ್ದ ಸ್ಕ್ರಾಪ್ ಶೆಡ್ ಗೂ ವ್ಯಾಪಿಸಿದೆ. ಘಟನೆಯಲ್ಲಿ ರಿಪೇರಿಗೆಂದು ಗ್ಯಾರೇಜ್ ಗೆ ತಂದಿದ್ದ ನಾಲ್ಕು ಕಾರುಗಳು ಬೆಂಕಿಗಾಹುತಿಯಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...