ಗ್ರಾಮಾಂತರ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುತ್ತಿದ್ದು, ಇದರ ಮೂಲಕ ದಾಖಲೆಗಳನ್ನು ಆನ್ಲೈನ್ ನಿಂದಲೇ ಅಪ್ಲೋಡ್ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.
ಅಲ್ಲದೆ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಲೆಕ್ಕಿಗರನ್ನು ಗ್ರಾಮ ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಜೊತೆಗೆ ಕಂದಾಯ ಇಲಾಖೆಯ ದಾಖಲೆಗಳನ್ನು ಕಂಪ್ಯೂಟರಿಕರಣ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈ ವ್ಯವಸ್ಥೆ ರಾಜ್ಯದ 6 ತಾಲೂಕುಗಳಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಜಾರಿಯಲ್ಲಿದೆ. ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲೇ ನೋಡುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಲಾಗುತ್ತಿದೆ.