ಗ್ರಾಮೀಣ/ನಗರ ಪ್ರದೇಶದ ಸಹಕಾರಿಗಳಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆಯನ್ನು ಈಗ ಮರು ಜಾರಿಗೊಳಿಸಿದ್ದು, ಮಾರ್ಗಸೂಚಿ ನಿಗದಿಪಡಿಸಲಾಗಿದೆ. ಅಲ್ಲದೆ ನವೆಂಬರ್ 1ರಿಂದಲೇ ಸದಸ್ಯರ ನೋಂದಣಿ ಕಾರ್ಯ ಆರಂಭವಾಗಲಿದೆ.
ಈ ಕುರಿತಂತೆ ಬುಧವಾರದಂದು ಸರ್ಕಾರಿ ಆದೇಶ ಹೊರ ಬಿದ್ದಿದ್ದು, ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ 500 ರೂಪಾಯಿ, ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂಪಾಯಿ ವಂತಿಗೆಯನ್ನು ನಿಗದಿಪಡಿಸಲಾಗಿದೆ.
ಒಂದು ವೇಳೆ ನಾಲ್ಕು ಮಂದಿಗಿಂತ ಹೆಚ್ಚಿನ ಕುಟುಂಬ ಸದಸ್ಯರಿದ್ದ ಪಕ್ಷದಲ್ಲಿ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂಪಾಯಿ ವಂತಿಗೆ ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಯಶಸ್ವಿನಿ ಯೋಜನೆ ವ್ಯಾಪ್ತಿಗೆ ಬಂದ ಸಂದರ್ಭದಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂಪಾಯಿವರೆಗಿನ ಚಿಕಿತ್ಸೆಯನ್ನು ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ಪಡೆದುಕೊಳ್ಳಬಹುದಾಗಿದೆ.