ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ನೆಮ್ಮದಿ ಸುದ್ದಿ ನೀಡಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸದಸ್ಯ ಅಬ್ದುಲ್ ಜಬ್ಬಾರ್ ಅವರ ಪ್ರಶ್ನೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ನಲ್ಲಿ ಈ ವಿಷಯ ತಿಳಿಸಿದ್ದು, ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸುವಂತೆ ಮಾಡಲು ಕ್ರಮ ವಹಿಸಲಾಗುತ್ತದೆ ಎಂದಿದ್ದಾರೆ.
ಕಳೆದ ಒಂದೂವರೆ ವರ್ಷದಲ್ಲಿ 2000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇವರುಗಳಿಗೆ ಗ್ರಾಮೀಣ ಸೇವೆ ಕಡ್ಡಾಯವಾಗಿದೆ ಎಂದು ಸಚಿವರು ತಿಳಿಸಿದ್ದು, ಜೊತೆಗೆ 3000 ಎಂಬಿಬಿಎಸ್ ಹಾಗೂ 1,000 ತಜ್ಞ ವೈದ್ಯರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.