alex Certify ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಹೈನುಗಾರಿಕೆಗೆ ಉತ್ತೇಜನ ನೀಡಲು 2 ಲಕ್ಷ ಸಹಕಾರ ಸಂಘ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಹೈನುಗಾರಿಕೆಗೆ ಉತ್ತೇಜನ ನೀಡಲು 2 ಲಕ್ಷ ಸಹಕಾರ ಸಂಘ ಸ್ಥಾಪನೆ

ಗ್ರಾಮೀಣ ಪ್ರದೇಶದ ಜನತೆಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಉತ್ತೇಜನ ನೀಡಲು ಸಹಕಾರಿ ಸಂಘಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ 2 ಲಕ್ಷ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಸ್ಥಾಪನೆಯಾಗಲಿವೆ.

ಬುಧವಾರದಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸಹಕಾರ ಸಂಘ ಈವರೆಗೂ ಇಲ್ಲದ ಗ್ರಾಮ ಮತ್ತು ಪಂಚಾಯಿತಿಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳನ್ನು ಸ್ಥಾಪಿಸಲಾಗುತ್ತದೆ.

ಸಹಕಾರ ಚಳುವಳಿಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದು ರೈತರ ಆದಾಯ ಹೆಚ್ಚಿಸಲು ನೆರವಾಗುವುದಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...