ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ‘ಜಲಜೀವನ್’ ಮಿಷನ್ ಅಡಿ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ಶುದ್ಧ ನೀರು ಪೂರೈಸುವ ‘ಮನೆಮನೆಗೂ ಗಂಗೆ’ಕಾಮಗಾರಿಗೆ 50,000 ಗ್ರಾಮಗಳಲ್ಲಿ ಚಾಲನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
2024 ರೊಳಗೆ ಈ ಯೋಜನೆ ಅಡಿ ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕಾಗಿದ್ದು, ರಾಜ್ಯದಲ್ಲಿ ಈಗಾಗಲೇ 2,693 ಗ್ರಾಮಗಳ ಪ್ರತಿಯೊಂದು ಮನೆಗಳಿಗೆ ನೀರಿನ ಸಂಪರ್ಕ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಗ್ರಾಮೀಣ ಜನತೆಗೆ ಶುದ್ಧ ನೀರನ್ನು ಪೂರೈಸುವ ನಿಟ್ಟಿನಲ್ಲಿ ನೀರು ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ಇದಕ್ಕಾಗಿ ರಾಜ್ಯದ 31 ಜಿಲ್ಲೆಯ 46 ತಾಲೂಕಿನಲ್ಲಿ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಜೊತೆಗೆ ಇನ್ನೂ ಎರಡು ಪ್ರಯೋಗಾಲಯಗಳ ಸ್ಥಾಪನೆಗೆ ಸಿದ್ಧತೆ ನಡೆದಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.