ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಳೆ ನೀರು ಕೊಯ್ಲು, ಕುಡಿಯುವ ನೀರು, ನೈರ್ಮಲ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಇದನ್ನು ಬಳಸಲು ಇಚ್ಚಿಸುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಸ್ವರಾಜ್ ಪೋರ್ಟಲ್ ನಲ್ಲಿ ಮಾಹಿತಿ ಅಪ್ಲೋಡ್ ಮಾಡಬೇಕಿದೆ.
ಅನುದಾನದ ಪೈಕಿ ಶೇಕಡಾ 60 ರಷ್ಟನ್ನು ಆದ್ಯತಾ ವಲಯಗಳಾದ ಕುಡಿಯುವ ನೀರು, ಮಳೆ ನೀರು ಕೊಯ್ಲು ಹಾಗು ಸ್ವಚ್ಛತೆಗೆ ಬಳಸಬೇಕಾಗಿದ್ದು, ಉಳಿದ ಶೇಕಡಾ 40ರಷ್ಟನ್ನು ಬಳಸುವ ವಿವೇಚನೆಯನ್ನು ಪಂಚಾಯತ್ ರಾಜ್ ಸಂಸ್ಥೆಗಳಿಗೆ ಬಿಡಲಾಗಿದೆ. ಕರ್ನಾಟಕಕ್ಕೆ 1,046.78 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿದ್ದು, ಇದನ್ನು ಪಡೆದುಕೊಳ್ಳಲು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ.
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಅನುದಾನ ಬಿಡುಗಡೆ ಮಾಡಿದ ಬಳಿಕ 10 ಕೆಲಸದ ದಿನಗಳ ಒಳಗಾಗಿ ಇದು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ತಲುಪಬೇಕಾಗಿದ್ದು, ಇದರ ಬಳಕೆಗೆ ಮುಂದಾಗುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಇ – ಗ್ರಾಮ ಸ್ವರಾಜ್ ಪೋರ್ಟಲ್ ನಲ್ಲಿ ವಾರ್ಷಿಕ ಕಾರ್ಯ ಯೋಜನೆ ವಿವರಗಳನ್ನು ಅಪ್ಲೋಡ್ ಮಾಡಬೇಕಾಗಿದೆ. ಅಲ್ಲದೆ ಕುಡಿಯುವ ನೀರು, ಮಳೆ ನೀರು ಕೊಯ್ಲು, ನೈರ್ಮಲ್ಯ ಮೊದಲಾದ ವಾರ್ಷಿಕ ಕ್ರಿಯಾ ಯೋಜನೆಯನ್ನು ರೂಪಿಸಿರಬೇಕು ಎಂಬ ಸೂಚನೆ ನೀಡಲಾಗಿದೆ.