alex Certify ಗ್ರಾಮ ಪಂಚಾಯಿತಿ ಅಧಿಕಾರ ಮೊಟಕುಗೊಳ್ಳುವ ಆತಂಕದಲ್ಲಿದ್ದವರಿಗೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮ ಪಂಚಾಯಿತಿ ಅಧಿಕಾರ ಮೊಟಕುಗೊಳ್ಳುವ ಆತಂಕದಲ್ಲಿದ್ದವರಿಗೆ ‘ಗುಡ್ ನ್ಯೂಸ್’

ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರವನ್ನು ಮೊಟಕುಗೊಳಿಸಿ ಹೆಚ್ಚಿನ ಜವಾಬ್ದಾರಿಯನ್ನು ಪಿಡಿಒ ಗಳಿಗೆ ನೀಡಲಾಗುತ್ತದೆ ಎಂಬ ಆತಂಕ ಕೆಲ ದಿನಗಳಿಂದ ಇದ್ದು, ಇದೀಗ ರಾಜ್ಯ ಸರ್ಕಾರ ಇದಕ್ಕೆ ತೆರೆ ಎಳೆದಿದೆ.

ಈ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಮೊಟಕುಗೊಳಿಸುವ ವಿಚಾರ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಸಹ ಈ ಕುರಿತಂತೆ ಮಾತನಾಡಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...