ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಗ್ರಾಮ ಲೆಕ್ಕಾಧಿಕಾರಿಗಳಿಗೆ ಅಗತ್ಯ ಮೂಲ ಸೌಲಭ್ಯವನ್ನು ಒದಗಿಸಬೇಕೆಂಬ ಕೂಗು ಬಹುಕಾಲದಿಂದ ಕೇಳಿಬರುತ್ತಿತ್ತು. ಇದಕ್ಕೆ ಸರ್ಕಾರ ಕೊನೆಗೂ ಸಮ್ಮತಿಸಿದೆ.
ಗ್ರಾಮ ಲೆಕ್ಕಾಧಿಕಾರಿಗಳಿಗೆ ಅಗತ್ಯ ಕೊಠಡಿ ಜೊತೆಗೆ ಮೂಲಸೌಲಭ್ಯ ಕಲ್ಪಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಅನುದಾನ ಬಳಸಲು ರಾಜ್ಯ ಸರ್ಕಾರ ಅಸ್ತು ಎಂದಿದ್ದು, ಈ ಕುರಿತ ಆದೇಶ ಹೊರ ಬಿದ್ದಿದೆ.
ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ, ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರದ ಯೋಜನೆ ಅನುಷ್ಠಾನಗೊಳಿಸಲು ಶ್ರಮಿಸುವ ಗ್ರಾಮ ಲೆಕ್ಕಾಧಿಕಾರಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ಅಗತ್ಯವಿದೆ. ಇದಕ್ಕಾಗಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಅನುದಾನ ಬಳಸಲು ಅನುಮತಿ ಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ಇದಕ್ಕೆ ಈಗ ಸ್ಪಂದನೆ ಸಿಕ್ಕಿದೆ.