alex Certify ಗ್ರಾ.ಪಂ. ಚುನಾವಣೆ ಅಭ್ಯರ್ಥಿಯೇ ಕಿಡ್ನಾಪ್; ಅಪಹರಣದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾ.ಪಂ. ಚುನಾವಣೆ ಅಭ್ಯರ್ಥಿಯೇ ಕಿಡ್ನಾಪ್; ಅಪಹರಣದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಗ್ರಾಮ ಪಂಚಾಯಿತಿ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯಲ್ಲಿ ಕಣಕ್ಕಿಳಿಯಲು ಮುಂದಾಗಿದ್ದ ಅಭ್ಯರ್ಥಿಯನ್ನೇ ಅಪಹರಿಸಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ನಿಡಸಾಲೆ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್ ಅಪಹರಣಕ್ಕೊಳಗಾದವರಾಗಿದ್ದು, ಅಪಹರಣದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಮಂಜುನಾಥ್, ನಿಡಸಾಲೆಗೆ ಬರುವಾಗ ಯಡಿಯೂರಿನ ಹೋಟೆಲ್ ಒಂದಕ್ಕೆ ಊಟಕ್ಕೆ ತೆರಳಿದ ಸಂದರ್ಭದಲ್ಲಿ ಅಪಹರಿಸಲಾಗಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಮಂಜುನಾಥ್ ಕಣಕ್ಕಿಳಿಯಲು ಮುಂದಾಗಿದ್ದರು ಎನ್ನಲಾಗಿದ್ದು, ಕಾಂಗ್ರೆಸ್ ನವರು ಅಪಹರಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...