ಬೆಳಗಾವಿ: ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ, ಮಲಪ್ರಭಾ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಘಟಪ್ರಭಾ ನದಿ ತೀರಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ಗೋಕಾಕ್-ಶಿಂಗಳಾಪುರ ನಡುವಿನ ಸೇತುವೆ ಸಂಪೂರ್ಣ ಜಲಾವೃತಗೊಂಡಿವೆ. ಈ ಭಾಗದ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಸೇತುವೆ ಮೇಲೆ ಘಟಪ್ರಭಾ ನದಿ ನೀರು ತುಂಬಿ ಹರಿಯುತ್ತಿದ್ದು, ಮುಳುಗಿದ ಸೇತುವೆ ಮೇಲೆಯೇ ಬೈಕ್ ಸವಾರರು ಹುಚ್ಚಾಟವಾಡುತ್ತಿದ್ದಾರೆ. ಪೊಲೀಸರು ನಿರ್ಬಂಧ ವಿಧಿಸಿದರೂ ಕೇಳದೇ ಜಲಾವೃತಗೊಂಡ ಸೇತುವೆ ಮೇಲೆಯೇ ಬೈಕ್ ಓಡಿಸಿ ದುಸ್ಸಾಹಸ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ನಿಪ್ಪಾಣಿ, ಗೋಕಾಕ್ ಸೇರಿದಂತೆ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವೆಡೆ ಬಿರುಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ಜನಜೀವನ ಅಸ್ತವ್ಯಸ್ಥಗೊಂದಿದೆ.