ರಾಜ್ಯದಲ್ಲಿ ಮಾಂಡೌಸ್ ಚಂಡಮಾರುತ ಅಬ್ಬರಿಸುತ್ತಿದ್ದು, ಇದರ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತವಾಗಿದೆ.
ಇದರ ಬಗ್ಗೆ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಡಳಿತ ಸೋಮವಾರವಾದ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ವ್ಯಾಪಕವಾಗಿ ಮಳೆ ಆಗುತ್ತಿರುವ ಕಾರಣ ವಿದ್ಯಾರ್ಥಿಗಳು ಬರುವುದು ಕಷ್ಟವಾಗಬಹುದು ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇದರ ಮಧ್ಯೆ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ ಎನ್ನಲಾಗುತ್ತಿದ್ದು, ಡಿಸೆಂಬರ್ ತಿಂಗಳ ಚಳಿ ಜೊತೆಗೆ ಮಳೆಯೂ ಬೀಳುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಉಲ್ಬಣವಾಗುವ ಆತಂಕ ಶುರುವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಹಲವು ಕಂಪನಿಗಳು ತನ್ನ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಅವಕಾಶ ನೀಡಿವೆ.