alex Certify ಚಂದನವನದ ಹಿರಿಯ ನಟ ಶಿವರಾಮ್​​ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದನವನದ ಹಿರಿಯ ನಟ ಶಿವರಾಮ್​​ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶ….!

ತೀವ್ರ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದ ಹಿರಿಯ ನಟ ಶಿವರಾಂ ತಮ್ಮ 84ನೇ ವಯಸ್ಸಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಅಪಘಾತದಿಂದಾಗಿ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಶಿವರಾಂ ಅವರಿಗೆ ಬ್ರೇನ್​ ಡ್ಯಾಮೇಜ್​ ಆಗಿತ್ತು. ಕಳೆದ ಎರಡು ದಿನಗಳಿಂದ ಶಿವರಾಂರನ್ನು ಬದುಕಿಸಿಕೊಳ್ಳಲು ವೈದ್ಯರು ಸಾಕಷ್ಟು ಪ್ರಯತ್ನಗಳನ್ನು ಮಾಡಿದರೂ ಸಹ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಹೊಸಕೇರೆ ಹಳ್ಳಿ ಬಳಿ ಸಂಭವಿಸಿದ ಅಪಘಾತದಿಂದ ನಟ ಶಿವರಾಂ ಕೋಮಾಗೆ ತೆರಳಿದ್ದರು. ತೆಲೆಗೆ ಬಲವಾದ ಏಟು ಬಿದ್ದ ಹಿನ್ನೆಲೆಯಲ್ಲಿ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಚಿಕಿತ್ಸೆ ಫಲಿಸದೇ ಶಿವರಾಂ ನಿಧನರಾಗಿದ್ದಾರೆ.

1958ರಲ್ಲಿ ಸಿನಿಮಾ ಲೋಕಕ್ಕೆ ಕಾಲಿಟ್ಟ ಶಿವರಾಂ ಚಂದನವನಕ್ಕೆ ಸಾಕಷ್ಟು ಸೇವೆಗಳನ್ನು ನೀಡಿದ್ದಾರೆ. ಸಹಾಯಕ ನಿರ್ದೇಶಕರಾಗಿ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ್ದ ಶಿವರಾಂ ಬಳಿಕ ಪೋಷಕ ಪಾತ್ರದಲ್ಲಿ ಮಿಂಚಿದ್ದರು. ಚಲಿಸುವ ಮೋಡಗಳು, ಶ್ರಾವಣ ಬಂತು. ಹಾಲುಜೇನು, ಹೊಂಬಿಸಲು, ಗುರು ಶಿಷ್ಯರು ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ಶಿವರಾಂ ಬಣ್ಣ ಹಚ್ಚಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...