alex Certify BIG BREAKING: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಕೇವಲ 4 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಕೇವಲ 4 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಹತ್ಯೆ ಪ್ರಕರಣ ನಡೆದ ನಾಲ್ಕೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ಎಂಬ ಅನುಮಾನದ ಮೇರೆಗೆ ಮಹಾಂತೇಶ್ ಹಾಗೂ ಮಂಜುನಾಥ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ನಿಗೂಢ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಚಂದ್ರಶೇಖರ್ ಗುರೂಜಿ ಹತ್ಯೆಗೆ ಬೇನಾಮಿ ಆಸ್ತಿ ವಿವಾದವೇ ಪ್ರಮುಖ ಕಾರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಗುರೂಜಿ ಆಪ್ತ ಮಹಾಂತೇಶ್ ಶಿರೂರ್ ಪತ್ನಿ ವನಜಾಕ್ಷಿಯನ್ನು ಘಟನೆ ನಡೆದ ಒಂದು ಗಂಟೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು.

ಇದರ ಬೆನ್ನಲ್ಲೇ ಇದೀಗ ವನಜಾಕ್ಷಿ ಪತಿ ಮಹಾಂತೇಶ್ ಹಾಗೂ ಇನ್ನೋರ್ವ ಆರೋಪಿ ಮಂಜುನಾಥ್ ನನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...