ಚಡ್ಡಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆ ಮಾಡುತ್ತಿದ್ದ ಪುಟ್ಟ ಬಾಲಕನೊಬ್ಬನಿಗೆ ವಿಚಿತ್ರ ಶಿಕ್ಷೆ ನೀಡಲಾಗಿದೆ. ಇಂಥದೊಂದು ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಂಗನವಾಡಿಯೊಂದರಲ್ಲಿ ನಡೆದಿದೆ.
ಮೂರು ವರ್ಷದ ಈ ವಿದ್ಯಾರ್ಥಿಯನ್ನು ಬೆದರಿಸುವ ಸಲುವಾಗಿ ಅಂಗನವಾಡಿ ಕೇಂದ್ರದ ಶಿಕ್ಷಕಿ ಮತ್ತು ಸಹಾಯಕಿ ಆತನ ಗುಪ್ತಾಂಗಕ್ಕೆ ಬೆಂಕಿ ಕಡ್ಡಿಯಿಂದ ಸುಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇದರ ಪರಿಣಾಮ ಬಾಲಕನ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿದ್ದು, ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಶಿಕ್ಷಕಿ ಹಾಗೂ ಸಹಾಯಕಿಗೆ ವಿವರಣೆ ನೀಡುವಂತೆ ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗಿದೆ.